HomeKarnatakaವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಗುಡ್ ನ್ಯೂಸ್: ಏ. 15ರಿಂದ ಮೇ 31 ರವರೆಗೆ ಸರ್ಕಾರಿ ನೌಕರರ...

ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಗುಡ್ ನ್ಯೂಸ್: ಏ. 15ರಿಂದ ಮೇ 31 ರವರೆಗೆ ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ

ಬೆಂಗಳೂರು: ರಾಜ್ಯ ಸರ್ಕಾರ 2026 -27 ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಏಪ್ರಿಲ್ 15 ರಿಂದ ಮೇ 31ರವರೆಗೆ ವರ್ಗಾವಣೆ ಕೈಗೊಳ್ಳಲು ಆದೇಶಿಸಲಾಗಿದೆ. ಗ್ರೂಪಿಗೆ ಎ, ಬಿ, ಸಿ ಮತ್ತು ಡಿ ವೃಂದಗಳಿಗೆ ನಡೆಸಲಾಗುವ ವರ್ಗಾವಣೆಗಳ ಸಂಖ್ಯೆ ಆಯಾ ವೃಂದಗಳ ಕಾರ್ಯನಿರತ ನೌಕರರ ಸಂಖ್ಯೆಯ ಶೇಕಡ 6 ಮೀರುವಂತಿಲ್ಲ ಎಂದು ತಿಳಿಸಲಾಗಿದೆ.

ಗ್ರೂಪ್ ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆ ಅಧಿಕಾರವನ್ನು ಆಯಾ ಇಲಾಖೆಯ ಸಚಿವರಿಗೆ ಮತ್ತು ಗ್ರೂಪ್ ಸಿ, ಡಿ ವೃಂದದ ಸಿಬ್ಬಂದಿ ವರ್ಗಾವಣೆಯ ಅಧಿಕಾರ ಆಯಾ ಸಕ್ಷಮ ಪ್ರಾಧಿಕಾರಗಳು ಚಲಾಯಿಸಬಹುದಾಗಿದೆ. ಸರ್ಕಾರಿ ನೌಕರರ ವಿರುದ್ಧ ಗಂಭೀರ ಸ್ವರೂಪದ ಆರೋಪಗಳಿದ್ದಲ್ಲಿ ಅಂತಹವರನ್ನು ಅವರು ಕೇಳುವ ಹುದ್ದೆಗಾಗಲಿ, ಅಥವಾ ತನಿಖೆ ಮೇಲೆ ಪ್ರಭಾವ ಬೀರಬಹುದು ಹುದ್ದೆಗಾಗಲಿ ನಿಯೋಜಿಸದೇ ಕಾರ್ಯಕಾರಿಯೇತರ ಹುದ್ದೆಗಳಿಗೆ ನೇಮಿಸಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಸ್ಥಳದಲ್ಲಿ ಎರಡು ವರ್ಷ ಅವಧಿ ಪೂರೈಸದ ಎ ಮತ್ತು ಬಿ ವೃಂದದ ಅಧಿಕಾರಿಗಳು, 4 ವರ್ಷ ಸೇವಾ ಅವಧಿ ಪೂರೈಸದ ಸಿ ವೃಂದದ ನೌಕರರು ಮತ್ತು 7 ವರ್ಷ ಆಗದ ಡಿ ವೃಂದದ ನೌಕರರನ್ನು ವರ್ಗಾವಣೆಗೆ ಪರಿಗಣಿಸಬಾರದು, ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವಿನಾಯಿತಿ ನೀಡಲಾಗಿದೆ. ನೌಕರರ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಅಂಗವೈಕಲ್ಯ ಹೊಂದಿದ್ದಲ್ಲಿ ವಿನಾಯಿತಿ ನೀಡಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular