ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ಸಾರ್ವತ್ರಿಕ ವರ್ಗಾವಣೆ ಅವಧಿ ಜೂ. 30ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು 2026-27ನೇ ಸಾಲಿನಲ್ಲಿ ಕೈಗೊಳ್ಳುವ ಸಂಬಂಧ ಮೇಲೆ ಓದಲಾದಂತೆ ದಿನಾಂಕ:13.04.2026ರಂದು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳಲ್ಲಿನ ಕೆಲವೊಂದು ಷರತ್ತು ಮತ್ತು ನಿರ್ಬಂಧಗಳಿಗೊಳಪಟ್ಟು ದಿನಾಂಕ: 15.04.2026 ರಿಂದ 31.05.2026 ರವರೆಗೆ, ವರ್ಗಾವಣೆ ಕೈಗೊಳ್ಳಲು ಅವಧಿಯನ್ನು ನಿಗದಿಪಡಿಸಲಾಗಿದ್ದು, ಪ್ರಸ್ತುತ ಸದರಿ ಅವಧಿಯು ಮುಕ್ತಾಯಗೊಂಡಿರುವುದರಿಂದ, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಸರ್ಕಾರವು ಪರಿಗಣಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು 2026-27 ಸಾಲಿನಲ್ಲಿ ಕೈಗೊಳ್ಳುವ ಸಂಬಂಧ ದಿನಾಂಕ:13.04.2026ರಂದು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳಲ್ಲಿನ ಷರತ್ತು ಮತ್ತು ನಿರ್ಬಂಧಗಳಿಗೊಳಪಟ್ಟು ವರ್ಗಾವಣೆ ಕೈಗೊಳ್ಳಲು, ದಿನಾಂಕ: 30.06.2026ರವರೆಗೆ ವಿಸ್ತರಿಸಿ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಆದೇಶಿಸಿದೆ.


