ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ 2026 -27 ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗೆ ನಿಗದಿಪಡಿಸಿದ್ದ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಜುಲೈ 15 ರವರೆಗೆ ಕಾಲಾವಕಾಶ ನೀಡಿ ಸರ್ಕಾರ ಮಂಗಳವಾರ ಆದೇಶಿಸಿದೆ.
ಈ ಮೊದಲು ಏಪ್ರಿಲ್ 13ರ ಆದೇಶದ ವರ್ಗಾವಣೆ ಮಾರ್ಗಸೂಚಿಯಲ್ಲಿ ಮತ್ತು ನಂತರದಲ್ಲಿ ಜೂನ್ 30ರವರೆಗೆ ವರ್ಗಾವಣೆ ಕೈಗೊಳ್ಳಲು ಸೂಚಿಸಲಾಗಿದ್ದು, ಇದೀಗ ಕಾಲಾವಕಾಶ ವಿಸ್ತರಿಸಲಾಗಿದೆ. ಇದೀಗ ಆಡಳಿತಾತ್ಮಕ ಅಗತ್ಯತೆಗಳನ್ನು ಪರಿಗಣಿಸಿ ವರ್ಗಾವಣೆಗೆ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

