ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣ ಖಾತೆಗೆ ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ  ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣವನ್ನು ಜಮೆ ಮಾಡುವ ಪ್ರಕ್ರಿಯೆ ಶುರುವಾಗಿದ್ದು, ಮೊದಲ ಹಂತದಲ್ಲಿ ಈ ಜಿಲ್ಲೆಗಳಲ್ಲಿ ಹಣ ವರ್ಗಾವಣೆ ಆಗಲಿದೆ.

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.
ಮೊದಲ ಕಂತಿನ ಹಣ ಬಾರದೇ ಇರುವವರಿಗೆ ತಕ್ಷಣಕ್ಕೆ 2000 ರೂ ಹಣ ಹಾಕಲಾಗುತ್ತದೆ , ಬಳಿಕ ನವೆಂಬರ್ ಮುಗಿಯುವದರೊಳಗೆ ಫಲಾನುಭವಿ ಮಹಿಳೆಯರ ಖಾತೆಗೆ ಹಾಕಲಾಗುತ್ತದೆ ಎಂದು ಸರ್ಕಾರ ಭರವಸೆ ನೀಡಿತ್ತು.
ಇದೀಗ ಹೊಸ ಅಪ್ ಡೇಟ್ ಸುದ್ದಿ ಎಂದರೆ ಯಾವ ಜಿಲ್ಲೆಗಳಿಗೆ ಸರ್ಕಾರ ಮೊದಲು ಹಣ ಬಿಡುಗಡೆ ಮಾಡುತ್ತದೆ ಎನ್ನುವ ಪಟ್ಟಿ ಬಿಡುಗಡೆ ಆಗಿದೆ.

ಬೆಂಗಳೂರು ನಗರ
ಬೆಂಗಳೂರು ಗ್ರಾಮಾಂತರ
ಮಂಡ್ಯಕೊಪ್ಪಳ
ಕೊಡಗು
ಚಾಮರಾಜನಗರ
ಚಿಕ್ಕಬಳ್ಳಾಪುರ
ಶಿವಮೊಗ್ಗ
ಕೋಲಾರ
ಬೀದರ್

ಹೌದು  ಸದ್ಯದ ಮಟ್ಟಿಗೆ ಯಾವೆಲ್ಲಾ ಮಹಿಳೆಯರಿಗೆ ಹಣ ವರ್ಗಾವಣೆ ಆಗಿಲ್ಲವೋ ಅಂತಹವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಜಿಲ್ಲೆಗಳಲ್ಲಿ ಹಣ ಹಾಕಿದ ನಂತರ ಉಳಿದ ಜಿಲ್ಲೆಗಳಲ್ಲೂ ಕೂಡ ಹಣ ಹಾಕಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿದೆ.

ಈಗಾಗಲೇ  ಸರ್ಕಾರ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗದೇ ಇರುವುದಕ್ಕೆ ಹಲವು ಕಾರಣಗಳನ್ನು ಕೂಡ ನೀಡಿತ್ತು, ಸರ್ಕಾರದ ಕಡೆಯಿಂದಲೂ ಹಣ ವರ್ಗಾವಣೆ ಆಗದೆ ಇರುವುದಕ್ಕೆ ತಾಂತ್ರಿಕ ದೋಷಗಳು ಕಾರಣವಾಗಿತ್ತು. ಇದೀಗ ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಸರ್ಕಾರ ಹಣ ಹಾಕುವ ಪ್ರಕ್ರಿಯೆ ನಡೆಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read