ಬೆಂಗಳೂರು: ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಹಾಪ್ ಕಾಮ್ಸ್ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ನಗರದ ಅಪಾರ್ಟ್ಮೆಂಟ್ ಗಳಲ್ಲಿ ಮೊಬೈಲ್ ವಾಹನಗಳ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ಯೋಜನೆ ರೂಪಿಸಿದೆ.
ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಾಪ್ ಕಾಮ್ಸ್ ಆಧುನಿಕ ಮಳಿಗೆಗಳು, ಸಂಚಾರಿ ಮೊಬೈಲ್ ಗಳನ್ನು ವಾಹನಗಳ ಮೂಲಕ ಅಪಾರ್ಟ್ಮೆಂಟ್ ಗಳಿಗೆ ಭೇಟಿ ನೀಡಿ ತರಕಾರಿ, ಹಣ್ಣು ಮಾರಾಟ ಮಾಡುತ್ತಿದೆ. ಸಿಬ್ಬಂದಿ ಕೊರತೆಯ ಕಾರಣ ಎಲ್ಲಾ ಅಪಾರ್ಟ್ಮೆಂಟ್ ಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಖಾಸಗಿ ಸಹಭಾಗಿತ್ವದಲ್ಲಿ ಸಂಚಾರಿ ಮೊಬೈಲ್ ವಾಹನಗಳ ಮೂಲಕ ತರಕಾರಿ, ಹಣ್ಣು ಮಾರಾಟಕ್ಕೆ ಯೋಜನೆ ರೂಪಿಸಲಾಗಿದೆ.
ಯುವಕರು ಸ್ವಾವಲಂಬಿಗಳಾಗಲು ಅವಕಾಶ ಕಲ್ಪಿಸಲಾಗುತ್ತದೆ. ಆಸಕ್ತರಿಗೆ ಹಣ್ಣು ಮತ್ತು ತರಕಾರಿ ಪೂರೈಕೆ ಜೊತೆಗೆ ಸಂಚಾರಿ ವಾಹನ ನೀಡಲಾಗುವುದು. ಯುವಕರ ಬಳಿ ವಾಹನ ಇದ್ದಲ್ಲಿ ಅದಕ್ಕೆ ಬಾಡಿಗೆ ಪಾವತಿಸಲಾಗುವುದು. ಹಾಪ್ ಕಾಮ್ಸ್ ನಿಗದಿಪಡಿಸಿದ ದರದಲ್ಲಿಯೇ ಹಣ್ಣು, ತರಕಾರಿ ಮಾರಾಟ ಮಾಡಲು ತಿಳಿಸಲಾಗುವುದು ಎಂದು ಹೇಳಲಾಗಿದೆ.