ನವದೆಹಲಿ: ರೈತರು, ಬಡವರಿಗೆ ವಿದ್ಯುತ್ ಸಬ್ಸಿಡಿ ಕಡಿತ ಮಾಡುವುದಿಲ್ಲ ಎಂದು ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್ ಹೇಳಿದ್ದಾರೆ.
ಉದ್ದೇಶಿತ ವಿದ್ಯುತ್ ತಿದ್ದುಪಡಿ ಮಸೂದೆ 2025 ರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ರೈತರು ಮತ್ತು ಬಡ ಗ್ರಾಹಕರಿಗೆ ನೀಡುತ್ತಿರುವ ಸಬ್ಸಿಡಿಗಳು ರದ್ದಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರತಿಪಕ್ಷಗಳು ಮತ್ತು ಅಖಿಲ ಭಾರತ ವಿದ್ಯುತ್ ಇಂಜಿನಿಯರ್ ಗಳ ಫೆಡರೇಷನ್ ಇತರೆ ಸಂಘಟನೆಗಳು ಈ ಕುರಿತಾಗಿ ಮಾಡುತ್ತಿರುವ ಆರೋಪಕ್ಕೆ ಸಂಸದರ ಸದನ ಸಮಿತಿಯೊಂದಿಗೆ ನಡೆದ ಸಮಾಲೋಚನ ಸಭೆಯಲ್ಲಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ರೈತರು, ಗೃಹಬಳಕೆ ಗ್ರಾಹಕರಂತಹ ಆದ್ಯತೆಯ ವರ್ಗಗಳಿಗೆ ವಿದ್ಯುತ್ ಸಬ್ಸಿಡಿ ನೀಡುವುದನ್ನು ರಾಜ್ಯ ಸರ್ಕಾರಗಳು ಮುಂದುವರೆಸಬಹುದು. ಈ ಮಸೂದೆಯಿಂದ ಅಂತಹ ಗ್ರಾಹಕರಿಗೆ ವಿದ್ಯುತ್ ವೆಚ್ಚದಲ್ಲಿ ಯಾವುದೇ ಹೆಚ್ಚಳವಾಗುವುದಿಲ್ಲ ಎಂದು ಹೇಳಿದ್ದಾರೆ.

