HomeKarnatakaಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಮಿಶ್ರತಳಿ ಹಸು ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಮಿಶ್ರತಳಿ ಹಸು ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ:ಜಿಲ್ಲೆಯಲ್ಲಿ 2023-24 ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಂದು ಮಿತ್ರ ತಳಿ ಹಸು ಘಟಕದಲ್ಲಿ ಒಂದು ಮಿಶ್ರತಳಿ ಹಸು ಖರೀದಿಸಲು ರೂ.65 ಸಾವಿರ ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ರೂ.58,500 (ಶೇ.90) ಸಹಾಯಧನ ಒದಗಿಸಲಾಗುವುದು, ಸಹಾಯ ಧನ (ಶೇ.10)ರಷ್ಟು ರೂ.65 ಸಾವಿರಗಳ ಫಲಾನುಭವಿಗಳ ವಂತಿಕೆ ಅಥವಾ ಸಾಲದೊಂದಿಗೆ ಅನುಷ್ಠಾನಗೊಳಿಸಲಾಗುವುದು.

ಅರ್ಹತೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರನ್ನು ಆಯ್ಕೆ ಮಾಡಲಾಗುವುದು. ಅರ್ಜಿದಾರರು ಫ್ರೂಟ್ಸ್ ಗುರುತಿನ ಸಂಖ್ಯೆ ಹೊಂದಿರಬೇಕು. ಆಯ್ಕೆಗೊಂಡ ಫಲಾನುಭವಿಗಳು ಕಡ್ಡಾಯವಾಗಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯರಾಗಿರಬೇಕು ಅಥವಾ ಸದಸ್ಯತ್ವ ಕಡ್ಡಾಯವಾಗಿ ಪಡೆಯಬೇಕು. ಆಯ್ಕೆಗೊಂಡ ಫಲಾನುಭವಿ ಸ್ವತ್ತು ಪಡೆದ ನಂತರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಡ್ಡಾಯವಾಗಿ ಹಾಲು ಪೂರೈಸುವ ಷರತ್ತಿಗೆ ಒಳಪಟ್ಟು ಮುಚ್ಚಳಿಕೆಯನ್ನು ವ್ಯವಸ್ಥಾಪಕರು/ಪ್ರತಿನಿಧಿಯವರಿಂದ ದೃಢೀಕರಿಸಿ ಸಲ್ಲಿಸಬೇಕು.

ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ನವಲತ್ತು ಪಡೆದಿರುವ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ.3 ರಷ್ಟು ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವುದು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಡಿ.05 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ತಾಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಮುಖ್ಯ ಪಶುವೈದ್ಯಾಧಿಕಾರಿಗಳು ಮತ್ತು ಬಳ್ಳಾರಿ, ಸಿರುಗುಪ್ಪ, ಸಂಡೂರು, ಕುರುಗೋಡು, ಕಂಪ್ಲಿ ತಾಲ್ಲೂಕುಗಳ ಪಶು ಆಸ್ಪತ್ರೆಯ ಕಚೇರಿಗಳಿಗೆ ಸಂಪರ್ಕಿಸಬಹುದು ಎಂದು ಉಪನಿರ್ದೇಶಕ ಡಾ.ಎಂ.ಸಿ.ವಿನೋದ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular