HomeKarnatakaರೈತರಿಗೆ ಗುಡ್ ನ್ಯೂಸ್: ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ರೈತರಿಗೆ ಗುಡ್ ನ್ಯೂಸ್: ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ‘ತರಕಾರಿ ಬೀಜಗಳ ಕಿಟ್’ಗಳನ್ನು ರೈತರಿಗೆ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನವಾಗಿದ್ದು, ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಪ್ರಸ್ತುತ ವರ್ಷದ ಪಹಣಿ/ಆರ್‌ಟಿಸಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.

ಆಸಕ್ತ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಗಾಂಧಿಪಾರ್ಕ್, ಶಿವಮೊಗ್ಗ ಇವರನ್ನು ಅಥವಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು ಸಲ್ಲಿಸಬಹುದು ಎಂದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular