ಶಿವಮೊಗ್ಗ: ಕೃಷಿ ಪಂಪ್‌ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಶಿವಮೊಗ್ಗ ತಾಲೂಕು ಕುಂಸಿ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕುಂಸಿ, ಆಯನೂರು, ಹಾರ‍್ನಹಳ್ಳಿ ಮತ್ತು ಶ್ರೀರಾಂಪುರ ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಹಾಗೂ ಈ ಹಿಂದೆ ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕ ಪಡೆಯದ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆರ್‌ಟಿಸಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫೋಟೋ, ಬಿಪಿಎಲ್ ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್, ಬೋರ್ವೆಲ್ ಜೊತೆ ರೈತರ ಜಿಪಿಎಸ್ ಪೋಟೋ ಮತ್ತು ಫೋನ್ ನಂ.ಗಳನ್ನು ಲಗತ್ತಿಸಿ ನ.19 ರೊಳಗಾಗಿ ಸಲ್ಲಿಸುವಂತೆ ಪಾಲನೆ ಮತ್ತು ನಿರ್ವಹಣೆ ಕುಂಸಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
