ಧಾರವಾಡ : ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರಿತ ಕೃಷಿಯಿಂದ ಸುಸ್ಥಿರ ಕೃಷಿಯನ್ನಾಗಿ ರೈತರ ಜೀವನಮಟ್ಟವನ್ನು ಉತ್ತಮಪಡಿಸಲು ಕೃಷಿ ಭಾಗ್ಯ ಮತ್ತು ಕೃಷಿ ಭಾಗ್ಯ ಎಸ್‍ಡಿಎಮ್‍ಎಫ್ ಈ ಯೋಜನೆಯನ್ನು ಪ್ಯಾಕೇಜ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಧಾರವಾಡ ಜಿಲ್ಲೆಗೆ ಪ್ರಸ್ತುತ ಸಾಲಿಗೆ ಈ ಕಾರ್ಯಕ್ರಮ ನಿಗದಿಯಾಗಿರುತ್ತದೆ. ಕೃಷಿ ಭಾಗ್ಯ ಯೋಜನೆಯಡಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ರೈತ ಫಲಾನುಭವಿಗಳು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಕೆ ಮಾಡಬೇಕಾಗುತ್ತದೆ.
ಕೃಷಿ ಭಾಗ್ಯ ಯೋಜನೆಗಳು: ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ ನಿರ್ಮಾಣ (ಕೃಷಿಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್‍ಸೆಟ್, ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ.
ಸದರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಅನುದಾನ ಲಭ್ಯವಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಕೂಡಲೇ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಆದ್ದರಿಂದ ಯೋಜನೆಯ ಅನುಕೂಲ ಪಡೆದುಕೊಳ್ಳಲು ಇಚ್ಛಿಸುವ ಎಲ್ಲಾ ವರ್ಗದ ಅರ್ಹ ರೈತ ಫಲಾನುಭವಿಗಳು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ರಾಜಶೇಖರ ಅನಗೌಡರ, ಧಾರವಾಡ (8277931282), ಮಂಜುಳಾ ತೆಂಬದ, ಹುಬ್ಬಳ್ಳಿ (8277931288), ಅಮರ ನಾಯ್ಕರ, ಕಲಘಟಗಿ (8277931291), ರೇಖಾ. ಆರ್. ಗಡ್ಡದವರ, ಕುಂದಗೋಳ (9071449976), ರವೀಂದ್ರಗೌಡ ಪಾಟೀಲ, ನವಲಗುಂದ (8277931295) ಸಂಪರ್ಕಿಸಬಹುದು ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
