ಕೃಷಿಕರಿಗೆ ಗುಡ್‌ ನ್ಯೂಸ್‌ : ʻಹೈಟೆಕ್ ಹಾರ್ವೆಸ್ಟರ್ ಹಬ್‌ʼ ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹಬ್‌ನಲ್ಲಿ ಕಡ್ಡಾಯವಾಗಿ ಕಂಬೈನ್ಡ್ ಹಾರ್ವೆಸ್ಟರ್ ಮತ್ತು ಟ್ರಾಂಯಕ್ಟರ್ ಆಪರೇಟೆಡ್ ಇರತಕ್ಕದ್ದು. ಈ ಯೋಜನೆಯಡಿ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ ಗರಿಷ್ಠ 40 ಲಕ್ಷ  (ಶೇ.50 ಸಹಾಯಧನ) ಮತ್ತು ಸಂಘ ಸಂಸ್ಥೆಗಳಿಗೆ ಗರಿಷ್ಠ 50 ಲಕ್ಷ (ಶೇ.70 ಸಹಾಯಧನ) ಇರುತ್ತದೆ. ಆದ ಕಾರಣ ಆಸಕ್ತ ರೈತರು/ಸಂಘ ಸಂಸ್ಥೆಗಳು/ರೈತ ಉತ್ಪಾದಕ ಸಂಸ್ಥೆ (ಎಫ್‌ಪಿಒ)/ ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (ಎಫ್‌ಎಂಬಿ) / ಕೃಷಿ ಯಂತ್ರಧಾರೆ ಕೇಂದ್ರಗಳು (ಸಿಎಚ್‌ಎಸ್‌ಸಿ)ಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಜನವರಿ 25 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬೇಕು.

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ ಉಪಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಲಾಗುವುದು.. ನಂತರ ಈ ಕಛೇರಿಯಲ್ಲಿ ಉಪಕೃಷಿ ನಿರ್ದೇಶಕರ ಕಛೇರಿಯಿಂದ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲಾ ಮಟ್ಟದ ಉಪಕರಣ ಸಮಿತಿಯಲ್ಲಿ ಮಂಡಿಸಲಾಗುವುದು. ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಒಂದೇ ಹಬ್‌ಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿ ಅರ್ಹಗೊಂಡಲ್ಲಿ, ಲಾಟರಿ ಮುಖಾಂತರ ಫಲಾನುಭವಿಯನ್ನು ಆಯ್ಕೆ ಮಾಡಲಾಗುವುದು. ಈ ಕಛೇರಿಯಿಂದ ಆಯ್ಕೆಯಾದ ಫಲಾನುಭವಿಗೆ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನಿಕರಿಸಲು ಕಾರ್ಯಾದೇಶ ನೀಡಲಾಗುವುದು. ಹಬ್‌ವಾರು ಸ್ವೀಕೃತವಾದ ಯಂತ್ರೋಪಕರಣಗಳನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪರಿಶೀಲಿಸಿ, ಸಹಾಯಧನವನ್ನು ನಿಯಾಮನುಸಾರ ಸಂಬಂಧಿಸಿದವರ ಸಾಲದ ಬ್ಯಾಂಕ್ ಖಾತೆಗೆ ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಜಮಾ ಮಾಡಲಾಗುವುದು.

ಫಲಾನುಭವಿ/ಸಂಘ ಸಂಸ್ಥೆ ಅರ್ಜಿಯೊಂದಿಗೆ ಸಂಸ್ಥೆಯಾದಲ್ಲಿ ಸಹಕಾರ ಸಂಘಗಳ ನಿಬಂಧನೆಯಂತೆ ಸಂಸ್ಥೆ ನೋಂದಾಯಿಸಿರುವ ಬಗ್ಗೆ ಪ್ರಮಾಣ ಪತ್ರ. ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಎಫ್‌ಐಡಿ ಸಂಖ್ಯೆ, ರೂ.20 ಛಾಪಾ ಕಾಗದದ ಮೇಲೆ ಹಬ್ ಅನ್ನು ಪರಭಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ (ನೋಟರಿಯೊಂದಿಗೆ), ಇತ್ತೀಚಿನ 2 ವರ್ಷಗಳ (2021-22, 2022-23) ಲೆಕ್ಕ ಪರಿಶೋಧನಾ ಪತ್ರ, ಸಹಾಯ ಧನವು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಆಗಿರುವುದರಿಂದ ಸಂಬಂಧಿಸಿರುವ ಬ್ಯಾಂಕ್ ನಿಂದ ತಾತ್ವಿಕ ಸಾಲ ಮಂಜೂರಾತಿ ಪತ್ರ (ಇನ್ ಪ್ರಿನ್ಸಿಪಲ್ ಲೋನ್ ಸ್ಯಾಂಕ್ಷನ್ ಲೆಟರ್) ಗಳನ್ನು ಲಗತ್ತಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read