HomeAgricultureರೈತರಿಗೆ ಗುಡ್ ನ್ಯೂಸ್ : ಕೃಷಿ ಯಂತ್ರೋಪಕರಣಗಳ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ

ರೈತರಿಗೆ ಗುಡ್ ನ್ಯೂಸ್ : ಕೃಷಿ ಯಂತ್ರೋಪಕರಣಗಳ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸೂಕ್ಷ್ಮ   ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ.ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸುವ ಮೂಲಕನೋಂದಾಯಿಸಿಕೊಳ್ಳಬಹುದು.

ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಿಯಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular