HomeKarnatakaರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 'ಕೃಷಿ ಭಾಗ್ಯ' ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ...

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವ ಉದ್ದೇಶವನ್ನು ಈ ಯೋಜನೆಯು ಹೊಂದಿರುತ್ತದೆ. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಯೋಜನೆಯ ಘಟಕಗಳು: ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ ಅಳವಡಿಸುವುದು (ಸಾಮಾನ್ಯ ಶೇ.80, ಪರಿಶಿಷ್ಟ ಜಾತಿ/ಪಂಗಡ ಶೇ.90), ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್‍ಸೆಟ್ ವಿತರಣೆ(ಸಾಮಾನ್ಯ ಶೇ.50, ಪರಿಶಿಷ್ಟ ಜಾತಿ/ಪಂಗಡ ಶೇ.90), ಸೂಕ್ಷ್ಮ (ತುಂತುರು, ಹನಿ) ನೀರಾವರಿ ಘಟಕ ವಿತರಣೆ (ಸಾಮಾನ್ಯ 90, ಪರಿಶಿಷ್ಟ ಜಾತಿ/ಪಂಗಡ ಶೇ.90), ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸುವುದು(ಸಾಮಾನ್ಯ ಶೇ.40, ಪರಿಶಿಷ್ಟ ಜಾತಿ/ಪಂಗಡ ಶೇ.50).

ಕೃಷಿ ಭಾಗ್ಯ ಯೋಜನೆ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ಫಲಾನುಭವಿ ರೈತರು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೆ ಅಳವಡಿಸುವುದು. ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೆ ನಂಬರ್‍ನಲ್ಲಿ ಕನಿಷ್ಠ 1 ಎಕರೆ ಭೂಮಿ ಇರಬೇಕು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಯಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿದ್ದಲ್ಲಿ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ(ಕೆಕಿಸಾನ್ ತಂತ್ರಾಂಶದಲ್ಲಿ ಭೌತಿಕವಾಗಿ ಸ್ಥಳ ಪರಿಶೀಲಿಸಿ ಖಾತರಿಪಡಿಸಿಕೊಳ್ಳುವುದು)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಾಯಧನ ಪಾವತಿ ವಿಧಾನ: ಕ್ಷೇತ್ರ ಬದು ನಿರ್ಮಾಣ ಹಾಗೂ ಕೃಷಿಹೊಂಡ ಪೂರ್ಣಗೊಂಡ ನಂತರ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಿಸಿಕೊಳ್ಳುವ ಬಗ್ಗೆ ರೈತರಿಂದ ದೃಢೀಕರಣ ಪತ್ರ ಪಡೆದುಕೊಂಡು, ಕ್ಷೇತ್ರ ಬದು ಹಾಗೂ ಕೃಷಿ ಹೊಂಡ ಘಟಕಗಳಿಗೆ ಸಂಬಂಧಿಸಿದ ಒಟ್ಟು ಸಹಾಯಧನದ ಶೇ.75 ರಷ್ಟು ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಕೃಷಿಭಾಗ್ಯ ಯೋಜನೆ ಪ್ಯಾಕೇಜ್ ಅಡಿ ಬರುವ ಆರು ಘಟಕಗಳ ಅನುಷ್ಠಾನ ಮತ್ತು ಕೆ-ಕಿಸಾನ್ ಮೊಬೈಲ್ ಆಪ್‍ನಲ್ಲಿ ದಾಖಲೀಕರಿಸಿದ ನಂತರ ಉಳಿಕೆ ಶೇ.25 ರಷ್ಟು ಸಹಾಯಧನ ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ವಿರಾಜಪೇಟೆ/ ಪೊನ್ನಂಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular