HomeAgricultureಅಕ್ರಮ-ಸಕ್ರಮ : `ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಅಕ್ರಮ-ಸಕ್ರಮ : `ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಲು ಬಗರ್ ಹುಕುಂ ತಂತ್ರಾಂಶ ಅನುಷ್ಠಾನ ಮಾಡಲಾಗಿದೆ.

ಈ ಕುರಿತು ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಅಕ್ರಮ-ಸಕ್ರಮ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳ ನ್ಯಾಯಯುತ ವಿಲೇವಾರಿ ಮತ್ತು ಅನಧಿಕೃತ ಸಾಗುವಳಿ ಭೂಮಿಯನ್ನು ಸಕ್ರಮಗೊಳಿಸುವ ಪ್ರಕ್ರಿಯೆ ಶೀಘ್ರವೇ ಮುಗಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಗರ್ ಹುಕುಂ ತಂತ್ರಾಂಶದ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟ್ ಲೈಟ್ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅರ್ಜಿಗಳ ಶೀಘ್ರ ವಿಲೇವಾರಿಗೂ ಈ ಆ್ಯಪ್ ಸಹಕಾರಿಯಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular