ರೈತರಿಗೆ ಗುಡ್ ನ್ಯೂಸ್: ಎಲ್ಲಾ ವರ್ಗದವರಿಗೆ 2ನೇ ಬಾರಿ ಶೇ. 90ರಷ್ಟು ಸಹಾಯಧನದಲ್ಲಿ ಹನಿ ನೀರಾವರಿ

ದಾವಣಗೆರೆ: ಸ್ವಾತಂತ್ರ್ಯವು ನಮ್ಮ ಹೊಣೆಗಾರಿಕೆ, ದೇಶದ ಏಕತೆ, ಶಾಂತಿ, ಪ್ರಗತಿ ಜೊತೆಗೆ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಮತ್ತು ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವಿಶ್ವದ ಗಮನ ಸೆಳೆಯುತ್ತಿದ್ದೇವೆ. ಆದರೆ, ಭ್ರμÁ್ಟಚಾರ, ಅಸಮಾನತೆ, ಪರಿಸರ ಮಾಲಿನ್ಯ, ನಿರುದ್ಯೋಗ ಮುಂತಾದ ಸವಾಲುಗಳನ್ನು ನಿವಾರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸುವುದು ಇಂದಿನ ಅಗತ್ಯವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

 ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ತಮ್ಮ ಸ್ವಾತಂತ್ರ್ಯೋತ್ಸವ ಸಂದೇಶದಲ್ಲಿ ಮಾತನಾಡಿದರು. 

ಈ ವರ್ಷ ಮುಂಗಾರು ಮಳೆ ಬಹಳ ಆಶಾದಾಯಕವಾಗಿದೆ. ರೈತರಿಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡಲಾಗಿದೆ. ಈ ವರ್ಷ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಮೂಲಕ ಜಿಲ್ಲೆಯ ತೋಟಗಾರಿಕೆ ಅಭಿವೃದ್ದಿಗೆ ರೂ.49.98 ಕೋಟಿ ಅನುದಾನ ನೀಡಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಶೇ 90 ರಷ್ಟು ಸಹಾಯಧನವನ್ನು ಒದಗಿಸುವುದರ ಜೊತೆಗೆ 7 ವರ್ಷಗಳ ಹಿಂದೆ ಹನಿ ನೀರಾವರಿಗೆ ಸಹಾಯಧನ ಪಡೆದಿದ್ದಲ್ಲಿ ಅದೇ ಸರ್ವೆ ನಂಬರ್ ಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಲಾಗಿದೆ. ಮತ್ತು ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ”ಹೆಸರಿನ ಬ್ರ್ಯಾಂಡ್ ನೀಡಲಾಗಿದೆ ಎಂದರು.

   ಕಂದಾಯ ಇಲಾಖೆಯಿಂದ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಿ 25581 ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಸಂಕಲ್ಪ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 2.11 ಲಕ್ಷ ಕಡತಗಳನ್ನು ಡಿಟಿಟಲೀಕರಣ ಮಾಡಿ 32302 ಪುಟಗಳ ದಾಖಲೆ ವಿತರಿಸಿ ರಾಜ್ಯದಲ್ಲಿಯೇ ದಾವಣಗೆರೆ ಮೊದಲ ಸ್ಥಾನದಲ್ಲಿದೆ.

 ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 100 ಗ್ರಾಮಗಳಲ್ಲಿ 24 ಗಂಟೆ ನೀರು ಪೂರೈಕೆ ಮಾಡಲು ಉದ್ದೇಶಿಸಿ ಈಗಾಗಲೇ 50 ಗ್ರಾಮಗಳಲ್ಲಿ 24*7 ನೀರು ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ 1771 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದ 407 ಕೇಂದ್ರಗಳಿಗೆ ನಿವೇಶನ ಒದಗಿಸಿ ಮುಂದಿನ ದಿನಗಳಲ್ಲಿ ಬಾಡಿಗೆ ಮುಕ್ತ ಅಂಗನವಾಡಿ ಕೇಂದ್ರಗಳ ಜಿಲ್ಲೆ ಎಂದು ಘೋಷಣೆ ಮಾಡಲಾಗುತ್ತದೆ. 

ಆಕರ್ಷಕ ಪಥ ಸಂಚಲನ: ಸ್ವಾತಂತ್ರ್ಯ ದಿನಾಚರಣೆಯ ಪಥ ಸಂಚಲನದಲ್ಲಿ ಪ್ರಶಾಂತ್ ಅವರು ಕವಾಯತು ಪಥ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು. 30 ವಿವಿಧ ಘಟಕಗಳು ಭಾಗವಹಿಸಿದ್ದವು ಅದರಲ್ಲಿ ಸಶಸ್ತ್ರ ಮೀಸಲು ಪಡೆ, ನಗರ ಉಪವಿಭಾಗ ಪೊಲೀಸ್ ತಂಡ, ಸಿವಿಲ್ ಪೆÇಲೀಸ್, ಗೃಹ ರಕ್ಷಕದಳ, ಅರಣ್ಯ ಇಲಾಖೆ ತಂಡ, ಅಗ್ನಿ ಶಾಮಕ ದಳ, ಗೃಹರಕ್ಷಕ ಮಹಿಳಾ ದಳ, ಕಂದಾಯ ಇಲಾಖೆ, ಮಹಾನಗರ ಪಾಲಿಕೆ, ಕಂದಾಯ, ಡಿಆರ್‍ಎಮ್, ಜಿಎಫ್‍ಜಿ ಕಾಲೇಜ್, ಎವಿಕೆ, ಸಿದ್ದಗಂಗಾ ಶಾಲೆ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳ ತಂಡ, ಪೆÇಲೀಸ್ ಬ್ಯಾಂಡ್ ತಂಡದಿಂದ ಆಕರ್ಷಕ ಪಥ ಸಂಚಲನÀ ನಡೆಸಲಾಯಿತು.

  ಪಥ ಸಂಚಲನದಲ್ಲಿ ಭಾಗವಹಿಸಿದ ಎಸ್.ಎಸ್.ಎನ್‍ಪಿಎಸ್ ಶಾಲೆ ಉತ್ತಮ ಸಮವಸ್ತ್ರ ವಿಜೇತ ಶಾಲೆಯಾಗಿ ಗುರುತಿಸಿಲಾಯಿತು. ಈ ಬಾರಿಯ ಪಥ ಸಂಚಲನದಲ್ಲಿ ಮಹಾನಗರ ಪಾಲಿಕೆ, ಕಂದಾಯ ಇಲಾಖೆ ಮತ್ತು ಪಿ.ಎಸ್.ಇ.ಎಂ.ಆರ್ ತೋಳಹುಣಸೆ ಪೈಪ್ ಬ್ಯಾಂಡ್ ಜೂನಿಯರ್ ತಂಡಗಳು ವಿಶೇಷ ತಂಡಗಳಾಗಿ ಭಾಗವಹಿಸಿದ್ದವು.

ವಿದ್ಯಾರ್ಥಿಗಳಿಂದ ಆಕರ್ಷಕ ದೇಶಭಕ್ತಿ ಗೀತೆಗಳ ನೃತ್ಯ ರೂಪಕ; ವಿಶ್ವಚೇತನ ಶಾಲೆಯಿಂದ ಹಿಂದೂಸ್ತಾನ್ ನೃತ್ಯವನ್ನು, ಲಲಿತಾ ಇಂಟರ್ ನ್ಯಾಷನಲ್ ಶಾಲೆಯಿಂದ  ಇವರಿಂದ ಗಾಂಧಿ ಗೋಖಲೆ ಶಾಂತಿ ಇಂಡಿಯಾ, ಗೋಲ್ಡನ್ ಪಬ್ಲಿಕ್ ಶಾಲೆಯಿಂದ ಸಂಕೋಲೆಯಿಂದ ಸ್ವಾತಂತ್ರ್ಯದೆಡೆಗೆ ರೂಪಕ ಪ್ರದರ್ಶನವನ್ನು ಸಾವಿರಾರು ವಿದ್ಯಾರ್ಥಿಗಳಿಂದ ಪ್ರದರ್ಶನ ಮಾಡಲ್ಪಟ್ಟಿತು.

  ಹಾಗೂ ಪಿಎಸ್‍ಎಸ್‍ಎಂಆರ್ ಶಾಲೆಯ ಮಕ್ಕಳು ವಿಶೇಷ ಬ್ಯಾಂಡ್ ವಾದ್ಯವನ್ನು ಪ್ರಸ್ತುತಪಡಿಸಿದರು.

ಬಹುಮಾನ ಪಡೆದಂತಹ ಶಾಲೆಗಳ ವಿವರ: ಗೋಲ್ಡನ್ ಪಬ್ಲಿಕ್ ಶಾಲೆ ಪ್ರಥಮ ಬಹುಮಾನ, ವಿಶ್ವಚೇತನ ಶಾಲೆ ದ್ವಿತೀಯ ಬಹುಮಾನ, ಲಲಿತಾ ಇಂಟರ್ ನ್ಯಾಷನಲ್ ಶಾಲೆ ತೃತೀಯ ಬಹುಮಾನ ಪಡೆಯಲಾಯಿತು. ಹಾಗೂ ಪಿಎಸ್‍ಎಸ್‍ಎಂಆರ್ ಶಾಲೆಯ ಮಕ್ಕಳು ವಿಶೇಷ ಬ್ಯಾಂಡ್ ವಾದ್ಯವನ್ನು ನುಡಿಸಿದ ಪುಟಾಣಿಗಳಿಗೆ ವಿಶೇಷ ಬಹುಮಾನ ನೀಡಲಾಯಿತು.

  ಡ್ರೋನ್ ಮೂಲಕ ರೈತರು ತಮ್ಮ ವಿವಿಧ ಬೆಳೆಗಳಿಗೆ ನ್ಯಾನೋ ಗೊಬ್ಬರ, ಔಷಧಿ ಸಿಂಪಡಿಸಲು ಸರಳ ಮತ್ತು ಕಡಿಮೆ ವೆಚ್ಚದಲ್ಲಿ ಬಳಕೆ ಮಾಡುವ ಬಗ್ಗೆ ಇಂಜಿನಿಯರ್ ಹೇಮಂತ್ ಡ್ರೋನ್ ಪ್ರದರ್ಶನ ಮಾಡಿದರು.

ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಪೊಲೀಸ್ ಮಹಾನಿರೀಕ್ಷಕರಾದ ಡಾ; ರವಿಕಾಂತೇಗೌಡ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ದೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಶಾಮನೂರು ಟಿ.ಬಸವರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read