HomeLatest Newsರೈತರಿಗೆ ಗುಡ್ ನ್ಯೂಸ್: ಕಿಸಾನ್ ಮಾಲ್ ನಲ್ಲಿ ರಿಯಾಯಿತಿ ದರದಲ್ಲಿ ಅವಶ್ಯಕ ವಸ್ತುಗಳು ಲಭ್ಯ

ರೈತರಿಗೆ ಗುಡ್ ನ್ಯೂಸ್: ಕಿಸಾನ್ ಮಾಲ್ ನಲ್ಲಿ ರಿಯಾಯಿತಿ ದರದಲ್ಲಿ ಅವಶ್ಯಕ ವಸ್ತುಗಳು ಲಭ್ಯ

ಧಾರವಾಡ ಜಿಲ್ಲೆಯ ಸುತ್ತಮುತ್ತಲಿನ ರೈತರ ಹಿತದೃಷ್ಟಿಯಿಂದ ತೋಟಗಾರಿಕೆ ಇಲಾಖೆಯು ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಿಸಾನ್ ಮಾಲ್‍ ಧಾರವಾಡ ಕುಂಬಾಪುರ ಫಾರ್ಮದ ಆವರಣದಲ್ಲಿರುವ ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರದಲ್ಲಿ ಸ್ಥಾಪಿಸಿದೆ.

ಕಿಸಾನ್ ಮಾಲ್‍ನಲ್ಲಿ ತೋಟಗಾರಿಕೆ ಹಾಗೂ ಕೃಷಿಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಅವಶ್ಯಕವಾಗಿರುವ ಬೀಜ, ರಸಗೊಬ್ಬರಗಳು, ಸಾವಯವಗೊಬ್ಬರಗಳು, ನೀರಾವರಿ ಹಾಗೂ ಕೃಷಿ ಯಂತ್ರೋಪಕರಣಗಳು, ಸಲಕರಣೆಗಳು ಹಾಗೂ ಎಲ್ಲ ರೀತಿಯ ಶಿಲೀಂದ್ರ ಹಾಗೂ ಕೀಟನಾಶಕಗಳು ಎಲ್ಲವೂ ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಲಭ್ಯವಿರುತ್ತವೆ.

ಎಲ್ಲ ರೈತ ಬಾಂಧವರು ಕಿಸಾನ್ ಮಾಲ್‍ನ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ದೂರವಾಣಿ ಸಂಖ್ಯೆ: 9110857484 ಗೆ ಸಂಪರ್ಕಿಸಬಹುದು ಎಂದು ತರಕಾರಿ ಬೆಳಗಳ ಉತ್ಕೃಷ್ಟ ಕೇಂದ್ರದ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular