ಬೆಂಗಳೂರು: ರಾಜ್ಯದಲ್ಲಿ ಸುಮಾರು 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದ್ದು, ವಾರಸುದಾರರ ನಡುವೆ ತಕರಾರು ಇಲ್ಲದ ಎಲ್ಲಾ ಜಮೀನುಗಳನ್ನು ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್ ಒಳಗೆ ವಾರಸುದಾರರ ಹೆಸರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸಸೌಧರಲ್ಲಿ ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀನಾ ಸಭೆ ನಡೆಸಿ ಮಾತನಾಡಿದರು.
ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಹನಿ ನೀರಾವರಿ, ಯಂತ್ರೋಪಕರಣ ಖರೀದಿ ಸಬ್ಸಿಡಿ, ಪಿಎಂ ಕಿಸಾನ್ ಸೌಲಭ್ಯ ನೀಡದಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಹೀಗಾಗಿ ನಾವೇ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡುತ್ತಿದ್ದೇವೆ. ಇದಕ್ಕಾಗಿ ವಿಎಗಳಿಗೆ ಪ್ರತಿ ಪ್ರಕರಣಕ್ಕೆ ಆರು ರೂಪಾಯಿ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.