ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ‘ಗ್ರೀನ್ ಸಿಗ್ನಲ್’

ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಹವಾಮಾನ ಆಧರಿತ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಈ ವಿಷಯ ತಿಳಿಸಿದ್ದು, ರಾಜ್ಯದ ರೈತರು ಈ ಯೋಜನೆಯ ಸದುಪಯೋಗ ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾದ ಬಳಿಕ ಕೆಲ ಕಾರಣಕ್ಕೆ ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈ ವಿಷಯವನ್ನು ಸಂಸತ್ತಿನಲ್ಲಿ ನಾನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನಕ್ಕೆ ತಂದಿದ್ದು, ನನ್ನ ಈ ಮನವಿಗೆ ಸ್ಪಂದಿಸಿ ಅವರು ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read