HomeLatest Newsರೈತರಿಗೆ ಗುಡ್ ನ್ಯೂಸ್: ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಕೇಂದ್ರ ಆರಂಭ, ನೋಂದಣಿಗೆ...

ರೈತರಿಗೆ ಗುಡ್ ನ್ಯೂಸ್: ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಕೇಂದ್ರ ಆರಂಭ, ನೋಂದಣಿಗೆ ಮನವಿ

ಕೊಪ್ಪಳ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಾಲ್‌ಗೆ ರೂ.7263/- ರಂತೆ ಗರಿಷ್ಠ 61,148 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಖರೀದಿಸಲಾಗುವುದು.

ಕೊಪ್ಪಳ ಜಿಲ್ಲೆಯ ರೈತರಿಂದ ಶೇಂಗಾ ಖರೀದಿಸುವ ಕುರಿತು ಸೆಪ್ಟೆಂಬರ್ 30 ರಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯಲ್ಲಿ ಶೇಂಗಾ ಖರೀದಿ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಖರೀದಿ ಕೇಂದ್ರಗಳಾದ ಕೆಒಎಫ್ ಅಡಿಯಲ್ಲಿ ಅಳವಂಡಿಯ ಒಜಿಸಿಎಸ್ ಅಳವಂಡಿ, ಯಲಬುರ್ಗಾದ ಒಜಿಸಿಎಸ್ ಬೇವೂರು ಹಾಗೂ ನಾಗನಕಲ್‌ನ ಒಜಿಸಿಎಸ್ ನಾಗನಕಲ್‌ನ ನೋಂದಣಿ ಕೇಂದ್ರದಲ್ಲಿ ರೈತರು ನೋಂದಣಿ ಮಾಡಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖರೀದಿ ಕೇಂದ್ರಗಳ ವ್ಯವಸ್ಥಿತ ನಿರ್ವಹಣೆಗೆ ಕೊಪ್ಪಳ ತಾಲ್ಲೂಕಿನ ಅಳವಂಡಿ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕೊಪ್ಪಳ ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ, ಮೊ.ಸಂ: 9902224089, ಯಲಬುರ್ಗಾ ತಾಲ್ಲೂಕಿನ ಬೇವೂರು ಖರೀದಿ ಕೇಂದ್ರಗಳ ನೋಡಲ್ ಅಧಿಕಾರಿಗಳಾಗಿ  ಯಲಬುರ್ಗಾ ಎಪಿಎಂಸಿಯ ಕಾರ್ಯದರ್ಶಿ ಗುರುಪ್ರಸಾದ ಗುಡಿ, ಮೊ.ಸಂ: 9972054874, ಕಾರಟಗಿ ತಾಲ್ಲೂಕಿನ ನಾಗನಕಲ್ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕಾರಟಗಿ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಹರೀಶ ಪತ್ತಾರ, ಮೊ.ಸಂ: 9060893320 ಇವರನ್ನು ನಿಯೋಜಿಸಲಾಗಿದೆ.

ಪ್ರತಿ ಎಕರೆಗೆ 3 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್‌ನAತೆ ಶೇಂಗಾ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಮಾತ್ರ ಖರೀದಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು, ವಿಭಾಗೀಯ ಕಛೇರಿ, ಕೊಪ್ಪಳ ಮೊ.ಸಂ: 9591812142 ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular