HomeLatest Newsರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2389 ರಂತೆ ಖರೀದಿಸಲಾಗುವುದು.

ಈ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಯಮಿತ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಸಿಎಂಎಸ್/ಪಿಎಸಿಎಸ್/ಎಫ್ಪಿಓ/ಎಸ್ಜಿಎಸ್ ಗಳನ್ನು ಸಂಗ್ರಹಣಾ ಏಜೆನ್ಸಿಗಳನ್ನಾಗಿ ನೇಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ಗಳಲ್ಲಿರುವ ಕೆಎಫ್ಸಿಎಸ್ಸಿ ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ರೈತರಿಂದ ಭತ್ತ ಖರೀದಿಸಲಾಗುವುದು. ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ದಿ:31-12-2025 ರವರೆಗೆ ಭತ್ತವನ್ನು ನೊಂದಾಯಿಸಿಕೊಳ್ಳಬಹುದು. ಹಾಗೂ ದಿ:28-02-2026 ರ ಅವಧಿಯವರೆಗೆ ರೈತರಿಂದ ಭತ್ತವನ್ನು ಖರೀದಿ ಮಾಡಲಾಗುವುದು. ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular