HomeKarnatakaರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ...

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ.

ನಮೂನೆ 57ರಡಿ ಸಾಗುವಳಿ ಭೂಮಿ ಮಂಜೂರಾತಿಗಾಗಿ ರಾಜ್ಯಾದ್ಯಂತ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲಾ ಅರ್ಜಿಗಳನ್ನೂ ಪರಿಶೀಲಿಸಿ ಕಾನೂನಿನ ಮಿತಿಯೊಳಗೆ ಯಾರ ಪ್ರಭಾವಕ್ಕೂ ಒಳಗಾಗದೆ, ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ನೆರವಾಗಬೇಕು. ಎಲ್ಲಾ ಸರ್ಕಾರಿ ಸರ್ವೆ ನಂಬರ್‌ಗಳನ್ನೂ ಒಂದು ಬಾರಿ ಅಳತೆ ಮಾಡಿ ಸಂರಕ್ಷಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ವೆ ಇಲಾಖೆಯಲ್ಲಿನ ಸಮಸ್ಯೆಗಳು, ಪಹಣಿ 3 ಹಾಗೂ 9ರ ವ್ಯತ್ಯಾಸ ಪ್ರಕರಣಗಳಿಂದ ರೈತರು ತೊಂದರೆ ಅನುಭವಿಸುತ್ತಿದ್ದು, ತ್ವರಿತವಾಗಿ ಈ ಪ್ರಕರಣಗಳಿಗೆ ಮುಕ್ತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular