HomeIndiaಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಕಿಸಾನ್ ಸಮ್ಮಾನ್ ನಿಧಿ, ವಿಮಾ ಯೋಜನೆ ಜಾರಿ

ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಕಿಸಾನ್ ಸಮ್ಮಾನ್ ನಿಧಿ, ವಿಮಾ ಯೋಜನೆ ಜಾರಿ

ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಿಮಾ ಯೋಜನೆ ಜಾರಿ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ಅವರು, ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ರೈತರಿಗೆ ಬೆಳೆ ವಿಮೆ ಯೋಜನೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ 2,000 ರೂ. ನಂತೆ ಮೂರು ಬಾರಿ ಒಟ್ಟು 6,000ರೂ. ನಗದನ್ನು ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular