ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್ ಸೆಟ್ ಗಳಿಗೆ ಪೂರಕ ಸೌಲಭ್ಯ ಮುಂದುವರಿಕೆಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಕೃಷಿ ಪಂಪ್ ಸೆಟ್ ಗಳಿಗೆ ಪೂರಕ ಸೌಲಭ್ಯ ಮುಂದುವರಿಕೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರೈತರ ಹಿತಕಾಯಲು ಕೃಷಿ ಪಂಪ್ ಸೆಟ್ ಗಳಿಗೆ ನೀಡುವ ಪೂರಕ ಸೌಲಭ್ಯ ಮುಂದುವರಿಕೆಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ, ಇದು ಅವರ ಭ್ರಮೆ ಅಷ್ಟೇ ಎಂದಿದ್ದಾರೆ.

ಕಾಂಗ್ರೆಸ್ ಶಾಸಕರು ದುಬೈಗೆ ಪ್ರವಾಸ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಹಣದಲ್ಲಿ ಅವರು ಹೋಗುತ್ತಿದ್ದಾರೆ. ಸರ್ಕಾರದಿಂದ ನಾವು ಯಾರನ್ನೂ ಕಳಿಸೋಲ್ಲ ಎಂದರು. ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಸೋತು ಮನೆಯಲ್ಲಿರುವವರು. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದಕ್ಕೆಲ್ಲಾ ಉತ್ತರ ಕೊಡೋಕೆ ಆಗುವುದಿಲ್ಲ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read