HomeLatest Newsರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ತೊಗರಿ ಖರೀದಿಗೆ ಆದೇಶ

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ತೊಗರಿ ಖರೀದಿಗೆ ಆದೇಶ

2025-26 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಸಲು ಆದೇಶಿಸಲಾಗಿದೆ.

ಡಿ. 17 ರಂದು ಸರ್ಕಾರ ಆದೇಶ ಹೊರಡಿಸಿದ್ದು, ಕಲಬುರಗಿ ಜಿಲ್ಲಾಧಿಕಾರಿಯೊಂದಿಗೆ ನಡೆಸಿದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ, ಬೆಂಬಲ ಬೆಲೆ ಯೋಜನೆಯಡಿ ತೊಗರಿ ಪ್ರತಿ ಕ್ವಿಂಟಾಲ್‌ಗೆ ₹8,000 ದರದಲ್ಲಿ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಹಾಗೂ FRUITS ತಂತ್ರಾಂಶದಲ್ಲಿ ಲಭ್ಯವಿರುವಂತೆ ರೈತರು ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಲ್ಲಿ ತೊಗರಿಯನ್ನು ಖರೀದಿಸಲು ಅನುಮತಿ ನೀಡಲಾಗಿರುತ್ತದೆ.

ಸರ್ಕಾರದ ಆದೇಶದಂತೆ ಕಲಬುರಗಿ ಜಿಲ್ಲೆಗೆ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ, ಕಲಬುರಗಿ ಸಂಸ್ಥೆಯನ್ನು ರಾಜ್ಯ ಖರೀದಿ ಸಂಸ್ಥೆಗಳಾಗಿ ನೇಮಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 141 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು (PACS) ಮತ್ತು FPO ಗಳ ಮೂಲಕ ಪ್ರತಿಯೊಂದು ಖರೀದಿ ಕೇಂದ್ರಗಳಲ್ಲಿ POS ಯಂತ್ರಗಳಲ್ಲಿ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ UIDAI ಬಯೋ ಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿರುತ್ತದೆ.

ನೋಂದಣಿ ಕಾರ್ಯ ಪ್ರಾರಂಭವಾಗಿದ್ದು, ಮಾರ್ಚ್ 06, 2026 ರವರೆಗೆ ಮುಂದುವರಿಯಲಿದೆ. ರೈತರಿಂದ ಖರೀದಿಸಿದ ಉತ್ಪನ್ನದ ಮೌಲ್ಯವನ್ನು DBT ಪೋರ್ಟಲ್ ಮೂಲಕ ಪಾವತಿಸಲಾಗುವುದು. ಬೆಂಬಲ ಬೆಲೆ ದರಕ್ಕಿಂತ ಹೆಚ್ಚಿನ ಮಾರುಕಟ್ಟೆ ಧಾರಣೆ ಇದ್ದಲ್ಲಿ, NAFED ಸಂಸ್ಥೆಯು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಇ-ಆಕ್ಷನ್ ಪೋರ್ಟಲ್ ಹಾಗೂ ಮುಕ್ತ ಮಾರುಕಟ್ಟೆಯಲ್ಲಿ ಬಫರ್ ಸ್ಟಾಕ್ ಉದ್ದೇಶಕ್ಕಾಗಿ ನೋಂದಾಯಿತ ರೈತರಿಂದ ಬೆಂಬಲ ಬೆಲೆಗಿಂತಲೂ ಹೆಚ್ಚಿನ ದರದಲ್ಲಿ ಖರೀದಿ ಕೈಗೊಳ್ಳಲಿದೆ.

ಜಿಲ್ಲೆಯ ರೈತ ಬಾಂಧವರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಂಡು, ತಮ್ಮ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ (PACS) ಹಾಗೂ FPO ಗಳಿಗೆ ಮತ್ತು ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿರುವ ತೊಗರಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ತಾವು ಬೆಳೆದ ತೊಗರಿಯನ್ನು ನಿಗದಿತ ಅವಧಿಯಲ್ಲಿ ಮಾರಾಟಕ್ಕೆ ನೋಂದಾಯಿಸಿಕೊಂಡು ಮಾರಾಟ ಮಾಡಬೇಕಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್‌ ಫೋನ್ ಸಂಖ್ಯೆಗಳನ್ನು ಸಂಪರ್ಕಿಸಿ.

1. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಕಲಬುರಗಿ (KSCMF): ಮೊಬೈಲ್ ಸಂಖ್ಯೆ 9449864446

2. ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಕಲಬುರಗಿ (KSPAML): ಮೊಬೈಲ್ ಸಂಖ್ಯೆ 9964474444.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular