HomeLatest Newsರೈತರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ನಿಗದಿಪಡಿಸಿದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ರೈತರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ನಿಗದಿಪಡಿಸಿದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

 ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2389 ರಂತೆ ಖರೀದಿಸಲಾಗುವುದು. ಈ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಯಮಿತ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಸಿಎಂಎಸ್/ಪಿಎಸಿಎಸ್/ಎಫ್‌ಪಿಓ/ಎಸ್‌ಜಿಎಸ್ ಗಳನ್ನು ಸಂಗ್ರಹಣಾ ಏಜೆನ್ಸಿಗಳನ್ನಾಗಿ ನೇಮಿಸಲಾಗಿದೆ.

 ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್‌ನAತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ಗಳಲ್ಲಿರುವ ಕೆಎಫ್‌ಸಿಎಸ್‌ಸಿ ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ರೈತರಿಂದ ಭತ್ತ ಖರೀದಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರ‍್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ದಿ:31-12-2025 ರವರೆಗೆ ಭತ್ತವನ್ನು ನೊಂದಾಯಿಸಿಕೊಳ್ಳಬಹುದು. ಹಾಗೂ ದಿ:28-02-2026 ರ ಅವಧಿಯವರೆಗೆ ರೈತರಿಂದ ಭತ್ತವನ್ನು ಖರೀದಿ ಮಾಡಲಾಗುವುದು. ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular