HomeKarnatakaರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು : 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಸರ್ಕಾರವು ರಾಜ್ಯದಲ್ಲಿ 2.5 ಲಕ್ಷ ಮೆ. ಟನ್ ಗುರಿ ತಲುಪುವವರೆಗೆ ನೋಂದಣಿ ಕೈಗೊಳ್ಳಲು ಸೂಚಿಸಿದ್ದರಿಂದ, ರೈತರು ತಕ್ಷಣವೇ ನೋಂದಣಿ ಮತ್ತು ಖರೀದಿಯ ಉಪಯೋಗವನ್ನು ಸದುಪಯೋಗಪಡಿಸಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಮೊ.9686935278 ಹಾಗೂ ಆಯಾ ತಾಲ್ಲೂಕಿನ ಖರೀದಿ ಕೇಂದ್ರಗಳ ಖರೀದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular