ರಾಜ್ಯ ಸರ್ಕಾರದಿಂದ `ರೈತರಿಗೆ ಗುಡ್ ನ್ಯೂಸ್’ : ಅತಿವೃಷ್ಟಿ, ಪ್ರವಾಹ ಹಾನಿ ಪರಿಹಾರ ಹೆಚ್ಚಳ!

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಗೊಳಗಾದ ಬೆಳಗಳಿಗೆ ನೀಡುವ ಇನ್ ಪುಟ್ ಸಬ್ಸಿಡಿ ಪರಿಷ್ಕರಿಸಿ ಆದೇಶ ಹೊರಡಿಸಿದೆ.

2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಉಂಟಾದ ಬೆಳೆಹಾನಿಗೆ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆಹಾನಿಯಾದ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್ ಪುಟ್ ಸಬ್ಸಿಡಿ ಮೊತ್ತವನ್ನು ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ, ಪರಿಷ್ಕೃತ ದರದಲ್ಲಿ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.

ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಪರಿಷ್ಕೃತ ಬೆಲೆಗಳ ಮಾಹಿತಿ

ಮಳೆಯಾಶ್ರಿತ ಬೆಳೆಗಳಿಗೆ ಮಾರ್ಗಸೂಚಿ ದರ 8,500 ರೂ. ನಿಂದ 13,600 ರೂ.ಗೆ ಹೆಚ್ಚಿಸಲಾಗಿದೆ.

ನೀರಾವರಿ ಬೆಳೆಗಳಿಗೆ 17,000 ರೂಗಳಿಂದ 22,500 ರೂ.ಗಳಿಗೆ ಹೆಚ್ಚಿಸಲಾಗಿದೆ.

ಬಹುವಾರ್ಷಿಕ ಬೆಳೆಗಳಿಗೆ 22,000 ರೂ.ಗಳಿಂದ 28,000 ರೂ.ಗೆ ಪರಿಷ್ಕರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read