ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನಗಳ ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ. ಶೇಂಗಾ ಮತ್ತು ಸೋಯಾಬಿನ್ ಖರೀದಿ ಅವಧಿಯನ್ನು ಜನವರಿ 26ರವರೆಗೆ ವಿಸ್ತರಿಸಲಾಗಿದೆ.
ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇವುಗಳ ಖರೀದಿ ಅವಧಿ ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ ವಿಸ್ತರಿಸಬೇಕೆಂಬ ಮನವಿ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

