ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಕೃಷಿ ಯಂತ್ರೋಪಕರಣ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2023-24 ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಉಪ ಅಭಿಯಾನದ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ರೈತರು ಖರೀದಿಸುವ ಉತ್ಕøಷ್ಟ ಗುಣಮಟ್ಟದ ಉಪಕರಣಗಳಿಗೆ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ.50 ರಷ್ಟು ಮತ್ತು ಇತರೆ/ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿರುತ್ತದೆ.

ರೈತರು ಇಲಾಖೆಯಿಂದ ಅನುಮೋದನೆಗೊಂಡ ಯಂತ್ರೋಪಕರಣದ ಉತ್ಪಾದಕರು ಮತ್ತು ಸರಬರಾಜುದಾರರಿಂದ ಖರೀದಿಸಿದ್ದಲ್ಲಿ ಮಾತ್ರವೇ ಸಹಾಯಧನ ಲಭ್ಯವಾಗುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪಂಚಾಯತ್‍ನ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read