ಬೆಳಗಾವಿ: ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದರಂತೆ ವರ್ಷಕ್ಕೆ 12 ಋತುಚಕ್ರ ರಜೆ ನೀಡುವ ಬಗ್ಗೆ ಕರ್ನಾಟಕ ಮಹಿಳಾ ಯೋಗಕ್ಷೇಮ ಕಾಯ್ದೆ 2025 ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ,
ಕಾಯ್ದೆ ಅಡಿಯಲ್ಲಿ ರಾಜ್ಯದಲ್ಲಿ ಕರ್ನಾಟಕ ಯೋಗಕ್ಷೇಮ ಪ್ರಾಧಿಕಾರ ರಚಿಸಲಾಗುವುದು. ಋತುಚಕ್ರದ ಅವಧಿಯಲ್ಲಿ ಮಹಿಳೆಯರಿಗೆ ರಜೆ ನೀಡದಿರುವುದು, ಬೇಧ ಭಾವ ಮಾಡುವುದು ಕಂಡು ಬಂದರೆ 5 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.
ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ನೀಡಲಾಗುವುದು. ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಒಂದು ದಿನ ರಜೆ ನೀಡಲಾಗುವುದು. ಇದರಿಂದ ಶೈಕ್ಷಣಿಕ ಹಾಜರಾತಿಗೆ ಸಮಸ್ಯೆಯಾಗದಂತೆ ಶಿಕ್ಷಣ ಸಂಸ್ಥೆಗಳಲ್ಲಿ ಶೇಕಡ ಎರಡರಷ್ಟು ಹಾಜರಾತಿ ವಿನಾಯಿತಿ ನೀಡಲು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
ಖಾಸಗಿ ಸಂಸ್ಥೆಗಳಲ್ಲಿ ಬಯೋಡಿಗ್ರೇಡಬಲ್ ಸ್ಯಾನಿಟರಿ ಪ್ಯಾಡ್, ಮುಟ್ಟಿನ ಕಪ್, ಟ್ಯಾಂಪನ್ಸ್, ಸ್ಯಾನಿಟರಿ ನ್ಯಾಪ್ ಕಿನ್ಸ್, ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಹೇಳಲಾಗಿದೆ.
