HomeLatest Newsಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ಋತುಚಕ್ರ ರಜೆ

ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ಋತುಚಕ್ರ ರಜೆ

ಕಾರ್ಮಿಕರ ಕಾಯ್ದೆ ಅನ್ವಯ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರಿಗೆ ಪ್ರತಿ ಮಾಸಿಕ ಋತುಚಕ್ರ ರಜೆಯನ್ನು ಉದ್ಯೋಗದಾತರು ಒದಗಿಸಬೇಕು.

ಕಾರ್ಖಾನೆಗಳ ಕಾಯ್ದೆ-1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961, ತೋಟ ಕಾರ್ಮಿಕ ಕಾಯ್ದೆ-1951 ಬೀಡಿ ಸಿಗಾರ್ ಕಾರ್ಮಿಕರ ಕಾಯ್ದೆ-1966 ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ-1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದೆ.

ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಲ್ಲಿಯೇ ಬಳಸಿಕೊಳ್ಳಬೇಕು ಮತ್ತು ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular