HomeKarnatakaನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಮತ್ಸ್ಯ ವಾಹಿನಿ ಯೋಜನೆಯಡಿ ವಾಹನ ಪಡೆಯಲು ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಮತ್ಸ್ಯ ವಾಹಿನಿ ಯೋಜನೆಯಡಿ ವಾಹನ ಪಡೆಯಲು ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಹರಾಗಿರುತ್ತಾರೆ.

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿಗಳಿಂದ ಮಾಹೆಯಾನ ರೂ.3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ಸ್ಯವಾಹಿನಿ ವಾಹನಗಳನ್ನು ನೀಡಲಾಗುತ್ತದೆ.
ಅರ್ಜಿದಾರರು ಸಾಮಾನ್ಯ ವರ್ಗ ರೂ.1 ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ.50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ನ.11 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.8722574158, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.7204911897, ಬಳ್ಳಾರಿ ಮೀನುಗಾರಿಕೆ ಉಪ ನಿರ್ದೇಶಕರ ಮೊ.9449593156 ಗೆ ಸಂರ್ಪಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular