ಮೀನುಗಾರರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಇತ್ಯಾದಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ http://shimoga.nic.in ಪೋರ್ಟಲ್ ಮೂಲಕ ದಿ:30/09/2023 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449, ಸಾಗರ ಮತ್ತು ಸೊರಬ -9538044365, ತೀರ್ಥಹಳ್ಳಿ- 8655132438 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read