ಕೊಪ್ಪಳ: ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ ಮೀನುಗಾಗರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 25 ಮನೆಗಳು ಹಂಚಿಕೆಯಾಗಿದ್ದು, ಕೊಪ್ಪಳ ಮತ್ತು ಯಲಬುರ್ಗಾ ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಸದ್ಯಸರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಿರ್ವಸತಿ ಮೀನುಗಾರರು ಜೂ. 30 ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮೊ: 9148289737 ಗೆ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

