ಚಿಕ್ಕಬಳ್ಳಾಪುರ: ಮೀನುಗಾರಿಕೆ ಇಲಾಖೆ ಯಿಂದ 2025 26ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪಂಗಡದ ಆಯ್ತಾ ಮೀನುಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಶೇಕಡ 50 ಅಥವಾ ಗರಿಷ್ಠ ₹3 ಲಕ್ಷದ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೆಪ್ಟೆಂಬರ್ 10 ರೊಳಗೆ ಸಲ್ಲಿಸಬಹುದು. ಆಸಕ್ತರು ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು. ಮಾಹಿತಿಗೆ ಮೀನುಗಾರಿಕೆ ಉಪ ನಿರ್ದೇಶಕರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಗುಡಿಬಂಡೆ, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಚಿಂತಾಮಣಿ ಮತ್ತು ಗೌರಿಬಿದನೂರು, ಶಿಡ್ಲಘಟ್ಟ ಮೀನುಗಾರಿಕೆ ಸಹಾಯಕ್ಕೆ ನಿರ್ದೇಶಕರು ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.