ಬೆಂಗಳೂರು: ಹಳೆ ಪಿಂಚಣಿ ಜಾರಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಲು ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ.
ದಿನಾಂಕ: 12.08.2025 ರಂದು ಅಪರಾಹ್ನ 4 ಗಂಟೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರು ಇವರ ಅಧ್ಯಕ್ಷತೆಯಲ್ಲಿ ಕೊಠಡಿ ಸಂಖ್ಯೆ: 306, 3ನೇ ಮಹಡಿ, ವಿಧಾನಸೌಧ ಇಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಲು ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ.
ರಮಣ್ ದೀಪ್ ಚೌಧರಿ, ಭಾ.ಆ.ಸೇ, ಸರ್ಕಾರದ ಕಾರ್ಯದರ್ಶಿರವರ ನೇತೃತ್ವದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಿರುವ ಹಿಮಾಚಲ ಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ವರದಿಯನ್ನು ಸಲ್ಲಿಸಿದ್ದು ಮತ್ತು ತುಳಸಿ ಮದ್ದಿನೇನಿ, ಭಾ.ಆ.ಸೇ. ಸರ್ಕಾರದ ಕಾರ್ಯದರ್ಶಿರವರು ಆಂಧ್ರ ಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ವರದಿಯನ್ನು ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಸದರಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಲಾಗಿದೆ.
