ವರ್ಗಾವಣೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮೇ 15ರಿಂದ ಜೂ. 14ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ 15 ರಿಂದ ಜೂನ್ 14ರ ವರೆಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವತಿಯಿಂದ ಸಚಿವ ಸಂಪುಟ ಅನುಮೋದನೆಗೆ ಪ್ರಸ್ತಾವನೆ ಮಂಡಿಸಲಾಗಿದೆ. ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿಗಳು, ನೌಕರರನ್ನು ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ಮೀರದಂತೆ ವರ್ಗಾವಣೆ ಮಾಡಬಹುದಾಗಿದೆ. ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಸಚಿವರಿಗೆ, ಸಿ, ಡಿ ವೃಂದದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲು ಪ್ರಸ್ತಾಪಿಸಲಾಗಿದೆ.

ಒಂದು ಸ್ಥಳದಲ್ಲಿ ಎರಡು ವರ್ಷ ಕರ್ತವ್ಯ ಅವಧಿ ಪೂರ್ಣಗೊಳಿಸಿದ ಗ್ರೂಪಿ ಎ ಮತ್ತು ಬಿ ವೃಂದದ ಅಧಿಕಾರಿಗಳು, 4 ವರ್ಷ ಪೂರ್ಣಗೊಳಿಸಿದ ಸಿ ವೃಂದದ ನೌಕರರು, 7 ವರ್ಷ ಪೂರ್ಣಗೊಳಿಸಿದ ಡಿ ದರ್ಜೆ ನೌಕರರು ವರ್ಗಾವಣೆಗೆ ಅರ್ಹರಾಗಿರುತ್ತಾರೆ. ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆ ಪ್ರಸ್ತಾವವನ್ನು ಆಡಳಿತ ಇಲಾಖೆಯ ಮೂಲಕವೇ ಸಚಿವರಿಗೆ ಸಲ್ಲಿಸಬೇಕು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read