ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ” ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.
ಆರೋಗ್ಯಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್ ಕೆ.ಬಿ. ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಭೇಟಿ ಮಾಡಿ ಬೆಂಗಳೂರು ನಗರ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ” ಆಯೋಜಿಸುವ ಸಂಬಂಧ ಸಭೆ ನಡೆಸಲಾಯಿತು.
ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲು ಆಯುಕ್ತರು ಸಹಮತಿ ಸೂಚಿಸಿ ಮುಂದಿನ ಕ್ರಮವಹಿಸಲು ಇಲಾಖೆಯ ಅಧಿಕಾರಿ ನೌಕರರಿಗೆ ತಿಳಿಸಿದರು. ಇದಕ್ಕೆ. ರಾಜ್ಯಾಧ್ಯಕ್ಷರು ಆಯುಕ್ತರಿಗೆ ಅಭಿನಂದನೆ ತಿಳಿಸಿದ್ದಾರೆ.
ವೈದ್ಯಾಧಿಕಾರಿಗಳ ಸಂಘದ ರಾಜ್ಯಾದ್ಯಕ್ಷ ಡಾ. ರವೀಂದ್ರ ಮೇಟಿ. ಆರೋಗ್ಯ ಇಲಾಖೆ ನೌಕರರ ಸಂಘದ ರಾಜ್ಯಾದ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಹೆಚ್. ಗಿರಿಗೌಡ, ಗೌರವಾಧ್ಯಕ್ಷ ಬಸವರಾಜು, ಹಿರಿಯ ಉಪಾಧ್ಯಕ್ಷ ಮೋಹನ್ ಕುಮಾರ್, ಧಾರವಾಡ ಜಿಲ್ಲಾಧ್ಯಕ್ಷ ಸಿದ್ದನಗೌಡ, ಉಪಾಧ್ಯಕ್ಷರಾದ ಡಾ.ಸದಾನಂದ ನೆಲ್ಕುದ್ರಿ, ಚೇತನ್ ರಾಜು, ಶಂಕ್ರಪ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.