HomeLatest Newsಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಉಚಿತ ಆರೋಗ್ಯ ಶಿಬಿರ ಆಯೋಜನೆ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಉಚಿತ ಆರೋಗ್ಯ ಶಿಬಿರ ಆಯೋಜನೆ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ” ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

ಆರೋಗ್ಯಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್ ಕೆ.ಬಿ. ಅವರನ್ನು  ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಭೇಟಿ ಮಾಡಿ ಬೆಂಗಳೂರು ನಗರ ಹಾಗೂ ರಾಜ್ಯದ ಎಲ್ಲಾ  ಜಿಲ್ಲೆಗಳಲ್ಲಿ ಸರ್ಕಾರಿ ನೌಕರರಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ” ಆಯೋಜಿಸುವ ಸಂಬಂಧ ಸಭೆ ನಡೆಸಲಾಯಿತು.

ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲು ಆಯುಕ್ತರು ಸಹಮತಿ ಸೂಚಿಸಿ ಮುಂದಿನ ಕ್ರಮವಹಿಸಲು ಇಲಾಖೆಯ ಅಧಿಕಾರಿ ನೌಕರರಿಗೆ ತಿಳಿಸಿದರು. ಇದಕ್ಕೆ. ರಾಜ್ಯಾಧ್ಯಕ್ಷರು ಆಯುಕ್ತರಿಗೆ ಅಭಿನಂದನೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯಾಧಿಕಾರಿಗಳ ಸಂಘದ ರಾಜ್ಯಾದ್ಯಕ್ಷ ಡಾ. ರವೀಂದ್ರ ಮೇಟಿ. ಆರೋಗ್ಯ ಇಲಾಖೆ ನೌಕರರ ಸಂಘದ ರಾಜ್ಯಾದ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಹೆಚ್. ಗಿರಿಗೌಡ, ಗೌರವಾಧ್ಯಕ್ಷ ಬಸವರಾಜು, ಹಿರಿಯ ಉಪಾಧ್ಯಕ್ಷ ಮೋಹನ್ ಕುಮಾರ್, ಧಾರವಾಡ ಜಿಲ್ಲಾಧ್ಯಕ್ಷ ಸಿದ್ದನಗೌಡ, ಉಪಾಧ್ಯಕ್ಷರಾದ ಡಾ.ಸದಾನಂದ ನೆಲ್ಕುದ್ರಿ, ಚೇತನ್ ರಾಜು, ಶಂಕ್ರಪ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular