ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ವರ್ಷದಿಂದ ಉಚಿತವಾಗಿ ನೋಟ್‌ಬುಕ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈಗಾಗಲೇ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡುತ್ತಿದ್ದೇವೆ. ಮಕ್ಕಳಿಗಾಗಿ ಹಾಲು, ಮೊಟ್ಟೆ ಮತ್ತು ಬಿಸಿಯೂಟ ಯೋಜನೆ ಜಾರಿಗೊಳಿಸಲಾಗಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ವರ್ಷಕ್ಕೆ ₹65 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲು 27 ಕೋಟಿ ರೂ. ಒದಗಿಸಲಾಗಿದೆ. ಮಕ್ಕಳಿಗೆ ಹಾಲು, ಮೊಟ್ಟೆ, ರಾಗಿ ಮಾಲ್ಟ್, ಬಿಸಿಯೂಟ, ಶೂ, ಸಾಕ್ಸ್ ಸೇರಿ ಹಲವು ಕಾರ್ಯಕ್ರಮ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆಗೆ ನೋಟ್ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ.