HomeLatest Newsರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶಾಲೆಯ ಅಂಗಳಕ್ಕೆ ಸಂಚಾರಿ ತಾರಾಲಯ

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶಾಲೆಯ ಅಂಗಳಕ್ಕೆ ಸಂಚಾರಿ ತಾರಾಲಯ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಯ ಅಂಗಳಕ್ಕೆ ಸಂಚಾರಿ ತಾರಾಲಯದ ವ್ಯವಸ್ಥೆಯನ್ನ ಸರ್ಕಾರ ಮಾಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಚಾರಿ ಡಿಜಿಟಲ್ ತಾರಾಲಯ ಸಕ್ರಿಯವಾಗಿದ್ದು, ಶಾಲಾ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿಯನ್ನು ಬಿತ್ತುವಲ್ಲಿ ಯಶಸ್ವಿಯಾಗಿವೆ.

ತಾರಾಲಯಗಳಂತಹ ಸವಲತ್ತುಗಳು ನಗರಗಳಿಗೆ ಸೀಮಿತವಾಗಿತ್ತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅದು ಸುಲಭವಾಗಿ ಲಭ್ಯವಿರಲಿಲ್ಲ. ಅವರು ಕೂಡ ತಾರಾಲಯ, ಬಾಹ್ಯಾಕಾಶ ಪ್ರಯೋಗಾಲಯಗಳಂತಹ ಸವಲತ್ತುಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸಂಚಾರಿ ತಾರಾಲಯಗಳನ್ನು ಒದಗಿಸಿದ್ದೇವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 11 ಡಿಜಿಟಲ್ ಮೊಬೈಲ್ ಪ್ಲಾನೆಟೋರಿಯಂ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಹೈಸ್ಕೂಲ್ಗಳಲ್ಲಿ 46 ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಿದೆ.

  • ರಾಜ್ಯದಾದ್ಯಂತ 16.75 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
  • ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಚಾರಿ ಡಿಜಿಟಲ್ ತಾರಾಲಯ ಸಕ್ರಿಯವಾಗಿದ್ದು, ಶಾಲಾ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿಯನ್ನು ಬಿತ್ತುವಲ್ಲಿ ಯಶಸ್ವಿಯಾಗಿವೆ.
  • ಭವಿಷ್ಯದಲ್ಲಿ ಗ್ರಾಮೀಣ – ನಗರ ಎಂಬ ಶೈಕ್ಷಣಿಕ ಅಂತರ ಕಡಿಮೆಯಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಈ ಯೋಜನೆ ನೆರವಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular