ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ ಮಾಡಲು ನಿರ್ಧರಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಸಚಿವ ಹೆಚ್.ಕೆ ಪಾಟೀಲ್ ಶಾಲಾ ಮಕ್ಕಳಿಗೆ ಪ್ರಸ್ತುತ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನಿಂದ ವಾರದಲ್ಲಿ 3 ದಿನ ಹಾಲಿನ ಜೊತೆ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ವಿತರಣೆ ಮಾಡಲಾಗುತ್ತಿದೆ. ಇದನ್ನು ಮುಂದೆ ವಾರದಲ್ಲಿ 5 ದಿನಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದೆ. ಇದಕ್ಕೆ 27.02 ಕೋಟಿ ರೂ ನ್ನು ರಾಜ್ಯ ಸರ್ಕಾರ ಭರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದರು.