ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಖಗೋಳ ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯಿರಿಸಿದೆ.
ಪ್ರಸ್ತುತ ಕ್ರೈಸ್ ವಸತಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಿರುವ ಟೆಲಿಸ್ಕೋಪ್ ವಿತರಣೆ ಯೋಜನೆಯನ್ನು ರಾಜ್ಯದ ಇನ್ನಷ್ಟು ಸರ್ಕಾರಿ ಶಾಲೆಗಳಿಗೆ ವಿಸ್ತರಿಸುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಮುಂದಿನ ಬಜೆಟ್ನಲ್ಲಿ ಅಗತ್ಯ ಅನುದಾನ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ತಿಳಿಸಿದ್ದಾರೆ.
