ಬೆಂಗಳೂರು : 2025-26ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 40.68 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.11188.00 ಲಕ್ಷಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಸ್ಯಾಂಡಲ್ಗಳನ್ನು ವಿತರಿಸಬೇಕಾಗಿದೆ.
ಸದರಿ ಕಾರ್ಯಕ್ರಮಕ್ಕೆ ತಗಲುವ ವೆಚ್ಚವನ್ನು 2025-26ನೇ ಸಾಲಿನ ಆಯವ್ಯಯ ಲೆಕ್ಕ ಶೀರ್ಷಿಕೆ : 2202-01-109-0-03 Vidya Vikasa Scheme ಬಿಡುಗಡೆಗೊಳಿಸಲಾಗಿದ್ದು, ಈ ಕೆಳಕಂಡಂತೆ ಭರಿಸತಕ್ಕದ್ದು ಎಂದು ಸೂಚಿಸಿದೆ.




You Might Also Like
TAGGED:ಶೂ ಸಾಕ್ಸ್