HomeKarnataka'ಪದವಿ' ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಇಂಟರ್ನ್ ಶಿಪ್ ಜೊತೆಗೆ ಮಾಸಿಕ 17...

‘ಪದವಿ’ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಇಂಟರ್ನ್ ಶಿಪ್ ಜೊತೆಗೆ ಮಾಸಿಕ 17 ಸಾವಿರ ಭತ್ಯೆ..!

ಮೈಸೂರು : ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಸಿಕ್ಕಿದ್ದು, ಇಂಟರ್ನ್ ಶಿಪ್ ಜೊತೆಗೆ ಮಾಸಿಕ 17 ಸಾವಿರ ರೂ. ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ನಗರದ ಕ್ರಾಫರ್ಡ್ ಭವನದಲ್ಲಿ ನಿನ್ನೆ ನಡೆದ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ 3 ವರ್ಷದ ಪದವಿ ಕೋರ್ಸ್ಗಳಲ್ಲಿ ಕೊನೆಯ ವರ್ಷ ಕೌಶಲಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕೇಂದ್ರ ಮತ್ತು ರಾಜ್ಯಗಳ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಐಎಎಸ್ ಅಧಿಕಾರಿಗಳ ತಂಡ ಸ್ಥಾಪನೆ ಮಾಡಿಕೊಂಡಿರುವ “ಕ್ರಿಸ್ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.

ಎಇಡಿಪಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನೀಡಲಾಗುತ್ತದೆ, ಇದರಿಂದ ವಿದ್ಯಾರ್ಥಿಗಳು 11 ಸಾವಿರ ರೂ.ನಿಂದ 17 ಸಾವಿರ ರೂಪಾಯಿ ತರಬೇತಿ ಭತ್ಯೆ ಪಡೆಯಬಹುದು ಎಂದು ತಿಳಿಸಿದರು. 3 ವರ್ಷದ ಪದವಿ ಕೋರ್ಸ್ಗಳಲ್ಲಿ ಕೊನೆಯ ವರ್ಷ ಕೌಶಲಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.ಇದರ ಜೊತೆಗೆ ಉನ್ನತ ಶಿಕ್ಷಣದಲ್ಲಿ ಹಲವು ಬದಲಾವಣೆಗಳನ್ನು ತರಲು ನಿರ್ಧರಿಸಲಾಗಿದೆ , ಎಲ್ಲಾ ಬೋಧಕರು ಹಾಗೂ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡಲಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular