HomeLatest Newsಪದವೀಧರರಿಗೆ ಗುಡ್ ನ್ಯೂಸ್ : 'ಯುವನಿಧಿ' ಯೋಜನೆಯಡಿ 3,000 ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ.!

ಪದವೀಧರರಿಗೆ ಗುಡ್ ನ್ಯೂಸ್ : ‘ಯುವನಿಧಿ’ ಯೋಜನೆಯಡಿ 3,000 ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು : ಯುವನಿಧಿ ಯೋಜನೆಯಡಿ 3,000 ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಮಹತ್ತರ ಯೋಜನೆಯಾಗಿರುತ್ತದೆ.

ಪದವೀಧರರಿಗೆ/ಸ್ನಾತಕೊತ್ತರ ಪದವೀಧರರಿಗೆ ಮಾಹೆವಾರು ರೂ.3,000/- ಮತ್ತು ಡಿಪ್ಲೋಮಾ (6 ಬೋರ್ಡ್ಗಳಿಂದ) ತೇರ್ಗಡೆಯಾದವರಿಗೆ ಮಾಹೆವಾರು ರೂ.1,500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಯು ಪ್ರಸಕ್ತ ಸಾಲಿಗೂ ಮುಂದುವರೆದ ಯೋಜನೆಯಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025 ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಯೋಜನೆಯಡಿ ನೋಂದಾಯಿಸಿ ಕೊಳ್ಳಬಹುದಾಗಿರುತ್ತದೆ.

ಅರ್ಹತೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು.
  2. ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇರದವರು.
  3. ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು,
  4. ಕನಿಷ್ಠ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು.
    ಯುವನಿಧಿ ಪ್ಲಸ್ – ಕೌಶಲ್ಯ ತರಬೇತಿ ಕಾರ್ಯಕ್ರಮ
    ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು.
    ಅರ್ಹತೆ:
  5. 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು.
  6. ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇರದವರು.
  7. ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು,
  8. ಕನಿಷ್ಠ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು.

    ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify
    ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು.
    ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು
    ಪ್ರತಿ ತ್ರೈಮಾಸಿಕ 1 ರಿಂದ 25 ರೊಳಗೆ ಸ್ವಯಂ ಘೋಷಣೆ ನೀಡುವುದು ಕಡ್ಡಾಯ.

    ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡುವುದು ಹಾಗೂ ಸಹಾಯವಾಣಿ ಸಂಖ್ಯೆ 1800 599 7154 ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular