ಪದವೀಧರ ಶಿಕ್ಷಕರಿಗೆ ಗುಡ್ ನ್ಯೂಸ್: ಪ್ರಾಥಮಿಕ ಶಾಲೆ ಶಿಕ್ಷಕರಿಗೆ 6, 7ನೇ ತರಗತಿಗೂ ಬೋಧನೆಗೆ ಅವಕಾಶ

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರೆಗೆ ಪಾಠ ಮಾಡುತ್ತಿರುವ ಪದವೀಧರ ಶಿಕ್ಷಕರಿಗೆ ಆರು ಮತ್ತು 7ನೇ ತರಗತಿಗೂ ಬೋಧಿಸಲು ಅವಕಾಶ ನೀಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಕುರಿತಾಗಿ ಅಧಿಸೂಚನೆ ಹೊರಡಿಸಲಾಗಿದೆ. NCTE ಮಾರ್ಗಸೂಚಿ ಪ್ರಕಾರ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಹೊಂದಿರುವ ಮತ್ತು ಟಿಇಟಿ ಉತ್ತೀರ್ಣರಾಗಿರುವ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರಾಗಿರುತ್ತಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025ನ್ನು ಕರ್ನಾಟಕ ನಾಗರಿಕ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ರ ಕಲಂ-3 ರ ಉಪ ಕಲಂ (2) ರ ಖಂಡ (ಎ) ರಲ್ಲಿ ಅಗತ್ಯಪಡಿಸಿರುವಂತೆ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ-IVA (ಸಂಖ್ಯೆ: 659) ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಲು ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿ ಪ್ರಕಟಿಸಲಾಗಿದೆ.

1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು NCTE ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹೊಂದಿದ್ದಲ್ಲಿ, 6 ಮತ್ತು 7 ನೇ ತರಗತಿಗೆ ಬೋಧಿಸಲು ಅರ್ಹರಾಗತಕ್ಕದ್ದು ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read