ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ 26ನೇ ಕಂತಿನ ಎರಡು ಸಾವಿರ ರೂಪಾಯಿ ಹಣ ಪಲಾನುಭವಿಗಳ ಖಾತೆಗೆ ಜಮಾ ಆಗಿದೆ.
ಇದುವರೆಗೆ ಪ್ರತಿ ಮನೆಯ ಯಜಮಾನಿಗೆ ಒಟ್ಟು 52 ಸಾವಿರ ರೂಪಾಯಿ ಪಾವತಿಯಾದಂತಾಗಿದೆ. ಐದು ಗ್ಯಾರಂಟಿ ಯೋಜನೆಗಳು ಯಶಸ್ಸಿನ ಹಾದಿಯಲ್ಲಿ ಸಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವಂತೆ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ 1.20 ಲಕ್ಷ ಕೋಟಿ ರೂ. ಹಣ ಜನರಿಗೆ ವರ್ಗಾಯಿಸಿದೆ. ಗೃಹಲಕ್ಷ್ಮಿ ಯೋಜನೆಗೆ 62,345 ಕೋಟಿ ರೂ. ವೆಚ್ಚ ಮಾಡಲಾಗಿದೆ. 27ನೇ ಕಂತಿನ ಅನುದಾನ ಕೂಡ ಖಜಾನೆಯಿಂದ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ 31 ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

