HomeKarnataka‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಇಂದಿನಿಂದ 30ನೇ ಕಂತಿನ 2 ಸಾವಿರ ರೂ. ಫಲಾನುಭವಿಗಳ ಖಾತೆಗೆ ಜಮಾ

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಇಂದಿನಿಂದ 30ನೇ ಕಂತಿನ 2 ಸಾವಿರ ರೂ. ಫಲಾನುಭವಿಗಳ ಖಾತೆಗೆ ಜಮಾ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 30ನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದ್ದು, ಮೇ 20 ರಿಂದ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ಜಮಾ ಆಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದ್ದಾರೆ.

2026ರ ಏಪ್ರಿಲ್ ಮಾಹೆಯಲ್ಲಿ ಕೊಪ್ಪಳ ಜಿಲ್ಲೆಯ 3,09,274 ಮಹಿಳಾ ಫಲಾನುಭವಿಗಳಿಗೆ ಸುಮಾರು ರೂ. 61 ಕೋಟಿ, 85 ಲಕ್ಷದ 48 ಸಾವಿರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ ನಂತರ ಇಲ್ಲಿಯವರೆಗೆ ಕೊಪ್ಪಳ ಜಿಲ್ಲೆಯ ಅರ್ಹ ಮಹಿಳಾ ಫಲಾನುಭವಿಗಳಿಗೆ ಒಟ್ಟು 30 ಕಂತುಗಳಲ್ಲಿ ರೂ. 1860 ಕೋಟಿಗಳನ್ನು ನೇರವಾಗಿ ಆಯಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ. ಈ ಯೋಜನೆಯಡಿ ಒಬ್ಬ ಮಹಿಳಾ ಫಲಾನುಭವಿಗಳಿಗೆ ಇಲ್ಲಿಯವರೆಗೆ ರೂ. 60,000 ಗಳ ಸಹಾಯಧನ ಸಿಕ್ಕಿದಂತಾಗಿದೆ. ಇದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗಿದೆ. ಮಹಿಳೆಯರಿಗೆ ಕುಟುಂಬದ ನಿರ್ವಹಣೆ, ಮನೆಯ ದೈನಂದಿನ ಖರ್ಚುಗಳಿಗೆ ಸಹಾಯ, ವಿಶೇಷವಾಗಿ ಮಕ್ಕಳ ಶಿಕ್ಷಣಕ್ಕೆ ಗೃಹಲಕ್ಷ್ಮಿ ಯೋಜನೆಯ ಸಹಾಯಧನವು ಅತ್ಯಂತ ಸಹಕಾರಿಯಾಗಿದೆ ಮತ್ತು ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೂ ತುಂಬಾ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಫಲಾನುಭವಿಗಳಿಗೆ ನೇರವಾಗಿ ಸಹಾಯಧನ ದೊರೆಯುವ ಮಹತ್ವದ ಯೋಜನೆ ಇದಾಗಿದೆ ಎಂದರು.

 ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ನುಡಿದಂತೆ ನಡೆಯುತ್ತಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ನಿರ್ದೇಶನದಂತೆ ಮತ್ತು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರ ಹಾಗೂ ಜಿಲ್ಲೆಯ ಸಂಸದರು ಮತ್ತು ಶಾಸಕರ ಮಾರ್ಗದರ್ಶನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ತಾಂತ್ರಿಕ ಸಮಸ್ಯೆಗಳಿಂದಾಗಿ ಜಿಲ್ಲೆಯ 1302 ಫಲಾನುಭವಿಗಳ ಸಹಾಯಧನವು ಫಲಾನುಭವಿಗಳಿಗೆ ಜಮಾ ಆಗದೆ ಸರ್ಕಾರಕ್ಕೆ ವಾಪಸ್ ಆಗಿರುತ್ತದೆ. ಈ ಬಗ್ಗೆ ಸಮಸ್ಯೆಯನ್ನು ಸರಿಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳ ಸಮಸ್ಯೆಯನ್ನು ಸರಿಪಡಿಸುವಂತೆ ತಿಳಿಸಲಾಗಿದೆ. ಫಲಾನುಭವಿಗಳು ಸಹ ತಮ್ಮ ಬ್ಯಾಂಕ್ ಖಾತೆಯ ಇ-ಕೆವೈಸಿ, ಆಧಾರ್ ಲಿಂಕ್, ಬ್ಯಾಂಕ್ ಸೀಡಿಂಗ್ ಮತ್ತು ಇತರೆ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಪಡೆದುಕೊಳ್ಳಬೇಕು ಎಂದರು.

 ಈ ಬಾರಿಯ ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಮೊತ್ತವನ್ನು ಖಜಾನೆ ಇಲಾಖೆಯ ಎನ್.ಟಿ.ಟಿ.ಎ.ಐ ವರ್ಗಾವಣೆ ಮೂಲಕ ಪಾವತಿಸಲಾಗಿದ್ದು, ಮೇ 19 ರಿಂದ ಗೃಹಲಕ್ಷ್ಮೀ ಯೋಜನೆಯ ಕೊಪ್ಪಳ ಜಿಲ್ಲೆಯ ಎಲ್ಲಾ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಂದೇ ಬಾರಿಗೆ ಸಹಾಯಧನ ಜಮಾ ಆಗಲಿದೆ. ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಜಿಲ್ಲೆಯ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರವಾಗಿ ರಾಜ್ಯ ಸರ್ಕಾರಕ್ಕೆ ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular