ಬೆಂಗಳೂರು: ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಮಾಡಿಲ್ಲ. ಮಾರ್ಚ್ ವರ್ಷಾಂತ್ಯವಾಗಿದ್ದ ಕಾರಣ ಸಮಸ್ಯೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್ ತಿಂಗಳದ್ದು ಹೆಚ್ಚು ಕಡಿಮೆ ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ.
ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ ಮಾಡಿಲ್ಲ. ಶೀಘ್ರವೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.